ಕರ್ನಾಟಕದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿಯಿರುವ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಮತ್ತು 310 ಪ್ರಾಂಶುಪಾಲರ ಹುದ್ದೆಗಳು ಭರ್ತಿ ಮಾಡಲು ಈಗಾಗಲೇ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಅತೀ ಶೀಘ್ರದಲ್ಲಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್ ಅಶ್ವತ್ಥನಾರಾಯಣ ರವರು ತಿಳಿಸಿದ್ದರು.
ರಾಜ್ಯದಲ್ಲಿ 14000ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಪದವಿ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಸಹಾಯಕ ಪ್ರಾಧ್ಯಾಪಕರಾಗುವ ಎಲ್ಲಾ ಅರ್ಹತೆ ಹೊಂದಿದ್ದಾರೆ. ಬಹಳಷ್ಟು ಅತಿಥಿ ಉಪನ್ಯಾಸಕರು ಸಹಾಯಕ ಪ್ರಾಧ್ಯಾಪಕರಾಗಬೇಕಪ ಎನ್ನುವ ಉದ್ದೇಶದಿಂದ ನಿವೃತ್ತ ಪ್ರಾಧ್ಯಾಪಕರೊಬ್ಬರು ಅತಿಥಿ ಉಪನ್ಯಾಸಕರಿಗೆ ಅನುಭವಿ ಶಿಕ್ಷಕರಿಂದ ಸಹಾಯಕ ಪ್ರಾಧ್ಯಾಪಕರ ಪರೀಕ್ಷೆಯ ತರಬೇತಿ ನೀಡಲು ಚಿಂತಿಸಿದ್ದಾರೆ. ಈ ಬಗ್ಗೆ ಆಸಕ್ತ ಅತಿಥಿ ಉಪನ್ಯಾಸಕರು ಕೆಳಗೆ ನೀಡಿರುವ ಗೂಗಲ್ ಫಾರ್ಮ್ ನಲ್ಲಿ ಕೇಳಿರುವ ಪ್ರಶ್ನೆ ಗಳಿಗೆ ತಮ್ಮ ಅಭಿಪ್ರಾಯ ತಿಳಿಸಬೇಕೆಂದು ಮನವಿ ಮಾಡಿದ್ದಾರೆ.
ಈ ಲಿಂಕ್ ಕ್ಲಿಕ್ ಮಾಡಿ ನಿಮ್ಮ ಅಭಿಪ್ರಾಯ ತಿಳಿಸಿ
0 Comments