ಬಳ್ಳಾರಿ, ಡಿಸೆಂಬರ್ 27: ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕು ವ್ಯಾಪ್ತಿಯ ಸೋಮಸಮುದ್ರ ಗ್ರಾಮದಲ್ಲಿನ ಸರಕಾರಿ ಪ್ರೌಢಶಾಲೆಗೆ ಅತಿಥಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 31ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಯರು ಮಾಹಿತಿ ನೀಡಿದ್ದಾರೆ.
from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/applications-invited-for-guest-teacher-post-at-kuragodu-279330.html
0 Comments